Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:5 - ಕನ್ನಡ ಸತ್ಯವೇದವು C.L. Bible (BSI)

5 ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನೇ ಕೋಪರೋಷ ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಭುಜಪರಾಕ್ರಮದಿಂದಲೂ ನಿಮಗೆ ವಿರುದ್ಧವಾಗಿ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನ್ನ ಬಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಬಹಳ ಕೋಪ ಬಂದಿದೆ; ಅದಕ್ಕಾಗಿ ನನ್ನ ಬಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಬಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:5
21 ತಿಳಿವುಗಳ ಹೋಲಿಕೆ  

ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.” “ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ ನುಡಿ.


ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು. ಆಗ ನೀನು ಈವರೆಗೆ ಭೂಮಿಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದೆ.


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.


ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು