Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:11 - ಕನ್ನಡ ಸತ್ಯವೇದವು C.L. Bible (BSI)

11 ಜುದೇಯದ ಅರಸನಾದ ಯೋಷೀಯನ ಮಗನೂ ತನ್ನ ತಂದೆ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಹಾಗು ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಸರ್ವೇಶ್ವರ ಹೇಳುವುದು ಏನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೂದದ ಅರಸನಾದ ಯೋಷೀಯನ ಮಗನೂ ತನ್ನ ತಂದೆಯಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವದೇನಂದರೆ - ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ, ಈ ಸ್ಥಳದಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:11
10 ತಿಳಿವುಗಳ ಹೋಲಿಕೆ  

ಯೋಷೀಯನಿಗೆ ನಾಲ್ಕು ಜನಮಕ್ಕಳು: ಯೋಹಾನಾನ್, ಯೆಹೋಯಾಕೀಮ್, ಚಿದ್ಕೀಯ ಮತ್ತು ಶಲ್ಲೂಮ್.


ಫರೋಹ ನೆಕೋವನು, ಯೋಷೀಯನಿಗೆ ಬದಲಾಗಿ ಅವನ ಮಗ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು, ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದನು; ಯೆಹೋವಾಹಾಜನು ಅಲ್ಲೆ ಮೃತನಾದನು.


ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಅಪ್ಪಣೆಯಾದಂತೆ ಆಕೆಯ ಬಳಿ ವಿಚಾರಿಸಿದರು. ಹಸ್ತನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡ. ಆಕೆ ಜೆರುಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.


ಆಗ ಎಫ್ರಯಿಮರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯ, ಮೆಷಿಲ್ಲೇಮೋತನ ಮಗ ಬೆರೆಕ್ಯ, ಶಲ್ಲೂಮನ ಮಗ ಹಿಜ್ಕೀಯ, ಹದ್ಲೈಯನ ಮಗ ಅಮಾಸ ಎಂಬವರು ಯುದ್ಧದಿಂದ ಬರುತ್ತಿದ್ದವರ ಮುಂದೆ ನಿಂತು,


ಯೆಹೋವಾಹಾಜನು ಅರಸನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಆದ ಹಮೂಟಲ್ ಎಂಬಾಕೆ ಇವನ ತಾಯಿ.


ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಜೆರುಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ಸ್ಥಾನದಲ್ಲಿ ಅವನ ಮಗ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.


ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.


ಹಿಂದಿರುಗಬೇಕೆಂದು ಹಂಬಲಿಸಿದರೂ ತಾಯ್ನಾಡಿಗೆ ಹಿಂದಿರುಗುವುದೇ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು