Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:15 - ಕನ್ನಡ ಸತ್ಯವೇದವು C.L. Bible (BSI)

15 ದೇವದಾರಿನ ಕೆಲಸದಲ್ಲಿ, ಬೇರೆಯವರನ್ನು ಮೀರಿಸುವುದರಲ್ಲಿ ಅಡಗಿದೆಯೇ ನಿನ್ನ ದೊರೆತನದ ಹಿರಿಮೆ? ನಿನ್ನ ತಂದೆ ಎಷ್ಟೇ ಕುಡಿದರೂ ತಿಂದರೂ ನ್ಯಾಯನೀತಿಯನ್ನು ಪಾಲಿಸುತ್ತಿದ್ದನಲ್ಲವೆ? ಆಗ ಅವನಿಗೆ ಎಲ್ಲವು ನೆಮ್ಮದಿಯಾಗಿತ್ತಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧೆಯುಳ್ಳವನಾಗಿರುವದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:15
33 ತಿಳಿವುಗಳ ಹೋಲಿಕೆ  

ಸರ್ವೇಶ್ವರನಿಗೆ ಅಭಿಮುಖನಾಗಿ, ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಈ ಯೋಷೀಯನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ನಾಡೇ, ನಿನ್ನ ಒಡೆಯ ಕುಲೀನನಾಗಿದ್ದು, ನಿನ್ನ ನಾಯಕರೆಲ್ಲ ಸಕಾಲದಲ್ಲಿ ಊಟಮಾಡಿ, ಕುಡುಕರಾಗುವುದರ ಬದಲು ಶಕ್ತಿಯುತರಾದರೆ, ಅದು ನಿನ್ನ ಸೌಭಾಗ್ಯವೇ ಸರಿ.


ಅಂತೆಯೆ ರಾಜನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ರಾಜ್ಯಭಾರ ನೀತಿಯಾಧಾರದಿಂದ ಸುಸ್ಥಿರ.


ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.


ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.


ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.


ಅವನು ಎಡಕ್ಕಾಗಲಿ ಬಲಕ್ಕಾಗಲಿ ಹೋಗದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲೇ ನೇರವಾಗಿ ಸರ್ವೇಶ್ವರನ ಚಿತ್ತಾನುಸಾರ ನಡೆದನು.


ಯೋಷೀಯನಿಗೆ ನಾಲ್ಕು ಜನಮಕ್ಕಳು: ಯೋಹಾನಾನ್, ಯೆಹೋಯಾಕೀಮ್, ಚಿದ್ಕೀಯ ಮತ್ತು ಶಲ್ಲೂಮ್.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


“ನೀವು ನಿಮ್ಮ ನಡೆಯನ್ನೂ ಕೃತ್ಯಗಳನ್ನೂ ಪೂರ್ತಿಯಾಗಿ ತಿದ್ದುಕೊಳ್ಳಿ. ಒಬ್ಬರು ಮತ್ತೊಬ್ಬರೊಡನೆ ನ್ಯಾಯನೀತಿಯಿಂದ ವರ್ತಿಸಿರಿ.


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.


ಯೋಷೀಯನ ಉಳಿದ ಚರಿತ್ರೆ, ಸರ್ವೇಶ್ವರನ ಧರ್ಮಶಾಸ್ತ್ರ ಅನುಸಾರವಾಗಿ ಅವನು ಸಾಧಿಸಿದ ಧಾರ್ಮಿಕ ಸುಧಾರಣೆ ಹಾಗು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು