ಯೆರೆಮೀಯ 22:16 - ಕನ್ನಡ ಸತ್ಯವೇದವು C.L. Bible (BSI)16 ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಅವನಿಗೆ ನೆಮ್ಮದಿಯಾಗಿತ್ತು. ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವದೆಂದರೆ ಇದೇ ಎಂಬದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |