Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:17 - ಕನ್ನಡ ಸತ್ಯವೇದವು C.L. Bible (BSI)

17 ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:17
41 ತಿಳಿವುಗಳ ಹೋಲಿಕೆ  

ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಇದು ಕೂಡ ಯುವಸಿಂಹವಾಯಿತು ಇತರ ಸಿಂಹಗಳ ನಡುವೆ ತಿರುಗಾಡಿತು. ಬೇಟೆಯಾಡುವುದನು ಕಲಿತು ತಾನೂ ನರಭಕ್ಷಕನಾಗಲಾರಂಭಿಸಿತು.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ದಾರಿತಪ್ಪಿ ನಾನು ನಡೆದಿದ್ದರೆ ನನ್ನ ಹೃದಯ, ಕಣ್ಗಳನ್ನು ಹಿಂಬಾಲಿಸಿದ್ದರೆ ಕಲ್ಮಷ ನನ್ನ ಕೈಗೆ ಅಂಟಿಕೊಂಡಿದ್ದರೆ,


ಯೆಹೋಯಾಕೀಮನ ಉಳಿದ ಚರಿತ್ರೆ ಅವನು ನಡಿಸಿದ ಅಸಹ್ಯಕೃತ್ಯಗಳು ಹಾಗು ಅವನಲ್ಲಿ ಕಂಡುಬಂದದ್ದೆಲ್ಲವು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಕೀನನು ಅರಸನಾದನು.


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ಅವರ ಮನಸ್ಸು ಯೋಚಿಸುವುದು ಹಿಂಸೆಯನ್ನು, ಅವರ ತುಟಿ ಪ್ರಸ್ತಾಪಿಸುವುದು ಹಾನಿಯನ್ನು.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ಸಿಯೋನನ್ನು ನರಹತ್ಯೆಯಿಂದ, ಜೆರುಸಲೇಮನ್ನು ಅನ್ಯಾಯದಿಂದ ಕಟ್ಟುತ್ತಿರುವ ನೀವು ಕಿವಿಗೊಟ್ಟು ಕೇಳಿರಿ.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


ಅವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅವನ ಕಾಲದಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಬಂದನು.


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.


ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.


ಒಯ್ದವು ಅದನ್ನು ಬಾಬಿಲೋನಿನ ಅರಸನ ಬಳಿಗೆ ಬಿಗಿದು ಸರಪಣಿ, ಹಾಕಿ ಪಂಜರದೊಳಗೆ. ಅದರ ಗರ್ಜನೆ ಇಸ್ರಯೇಲಿನ ಗಿರಿಗಳಿಗೆ ಕೇಳಿಸದಂತೆ, ಸೇರಿಸಿಬಿಟ್ಟವು ಅದನ್ನು ಸುಭದ್ರ ಕೋಟೆಯೊಳಗೆ.


ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು