Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:2 - ಕನ್ನಡ ಸತ್ಯವೇದವು C.L. Bible (BSI)

2 ‘ದಾವೀದನ ಸಿಂಹಾಸನಾರೂಢನಾದ ಜುದೇಯದ ಅರಸನೇ, ಸರ್ವೇಶ್ವರನ ಮಾತನ್ನು ಕೇಳು; ನಿನ್ನ ಪರಿವಾರದವರೂ ಈ ಬಾಗಿಲುಗಳಲ್ಲಿ ಪ್ರವೇಶಿಸುವ ನಿನ್ನ ಪ್ರಜೆಗಳೂ ಕೇಳಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಾವೀದನ ಸಿಂಹಾಸನಾರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ‘ಯೆಹೂದದ ರಾಜನೇ, ಯೆಹೋವನಿಂದ ಬಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಧಿಕಾರಿಗಳು ಚೆನ್ನಾಗಿ ಕೇಳಬೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ‘ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಯೆಹೂದದ ಅರಸನೇ, ನೀನೂ, ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಸಹಿತವಾಗಿ ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:2
18 ತಿಳಿವುಗಳ ಹೋಲಿಕೆ  

ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡು ನಡೆದಿರಾದರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿ ತಮ್ಮ ಪರಿವಾರದೊಡನೆ ಹಾಗು ಪ್ರಜೆಗಳೊಡನೆ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


“ಕುರುಬರೇ, ಸರ್ವೇಶ್ವರನ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ -


ಈ ಕಾರಣ ಜುದೇಯದ ಅರಸ ಯೆಹೋಯಾಕೀಮನು ಆದ ನಿನ್ನ ವಿರುದ್ಧ ಸರ್ವೇಶ್ವರ ಹೀಗೆನ್ನುತ್ತಾರೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು. ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ಇರುಳಿನ ಚಳಿಗೂ ಈಡಾಗುವುದು.


ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’


‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


“ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;


ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಎಂದು ಆಜ್ಞೆಮಾಡಿದರು: “ನೀನು ಜುದೇಯದ ಅರಸನ ಮನೆಗೆ ಹೋಗು. ಅಲ್ಲಿ ಈ ಮಾತನ್ನು ಹೇಳು:


“ಇಸ್ರಯೇಲರ ದೇವರಾದ ಸರ್ವೇಶ್ವರನಾದ ನನ್ನ ನುಡಿ ಇದು: ನೀನು ಜುದೇಯದ ಅರಸ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆಂದು ಹೇಳು - ‘ಸರ್ವೇಶ್ವರನ ಮಾತನ್ನು ಆಲಿಸು: ಇಗೋ, ನಾನು ಈ ನಗರವನ್ನು ಬಾಬಿಲೋನಿನ ಅರಸನ ಕೈವಶಮಾಡುವೆನು. ಅವನು ಇದನ್ನು ಬೆಂಕಿಯಿಂದ ಸುಟ್ಟುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು