ಯೆರೆಮೀಯ 22:22 - ಕನ್ನಡ ಸತ್ಯವೇದವು C.L. Bible (BSI)22 ನಿನ್ನನ್ನು ಅಟ್ಟಿ ಮೇಯಿಸುವ ಕುರುಬರನ್ನು ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಮಿಂಡರನ್ನು ಸೆರೆಹಿಡಿದುಕೊಂಡು ಹೋಗುವರು. ಆಗ ಖಂಡಿತವಾಗಿ ನೀನು ಆಶಾಭಂಗಪಡುವೆ ನಿನ್ನ ದುಷ್ಕೃತ್ಯಗಳ ನಿಮಿತ್ತ ಅವಮಾನಕ್ಕೀಡಾಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು. ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವದು; ನಿನ್ನ ವಿುಂಡರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿವಿುತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವದು ಖಂಡಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೂದವೇ, ನನ್ನ ದಂಡನೆಯು ಒಂದು ಬಿರುಗಾಳಿಯಂತೆ ಬರುವುದು. ಅದು ನಿನ್ನ ಎಲ್ಲಾ ಕುರುಬರನ್ನು (ನಾಯಕರನ್ನು) ಹಾರಿಸಿಕೊಂಡು ಹೋಗುವುದು. ಯಾವುದಾದರೂ ಬೇರೆ ಜನಾಂಗ ನಿನಗೆ ಸಹಾಯಮಾಡಬಹುದೆಂದು ನೀನು ಭಾವಿಸಿಕೊಂಡಿರುವೆ. ಆದರೆ ಆ ಜನಾಂಗಗಳನ್ನೂ ಸೋಲಿಸಲಾಗುವುದು. ಆಗ ನಿನಗೆ ನಿಜವಾಗಿಯೂ ಆಶಾಭಂಗವಾಗುವುದು. ನೀನು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಿನ್ನ ಕುರುಬರನ್ನೆಲ್ಲಾ ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಜೊತೆಗಾರರು ಸೆರೆಗೆ ಹೋಗುವರು. ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ, ಅವಮಾನವೂ ಆಗುವುದು. ಅಧ್ಯಾಯವನ್ನು ನೋಡಿ |