Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:24 - ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:24
16 ತಿಳಿವುಗಳ ಹೋಲಿಕೆ  

ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು.


ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.


ಯೆಹೋಯಾಕೀಮನಿಗೆ ಯೆಕೊನ್ಯ ಮತ್ತು ಚಿದ್ಕೀಯ ಎಂಬಿಬ್ಬರು ಮಕ್ಕಳಿದ್ದರು.


ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ,


ಯೆಹೋಯಾಕೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ನೋಡು, ನಿನ್ನ ಚಿತ್ರ ಕೊರೆದಿದೆ ನನ್ನ ಅಂಗೈಗಳಲೆ ನಿನ್ನ ಪೌಳಿಗೋಡೆಗಳು ಇವೆ ಸದಾ ನನ್ನ ಕಣ್ಣೆದುರಿನಲೆ.


ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ.”


ಅರಸ ಯೆಕೋನ್ಯನು, ರಾಜಮಾತೆಯು, ಕಂಚುಕಿಗಳು, ಜುದೇಯದ ಮತ್ತು ಜೆರುಸಲೇಮಿನ ಪದಾಧಿಕಾರಿಗಳು, ಶಿಲ್ಪಿಗಳು, ಕಮ್ಮಾರರು, ಇವರೆಲ್ಲರು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು