ಯೆರೆಮೀಯ 22:25 - ಕನ್ನಡ ಸತ್ಯವೇದವು C.L. Bible (BSI)25 ನಿನ್ನ ಪ್ರಾಣ ಹುಡುಕುತ್ತಿರುವವರ ಕೈಗೆ, ನಿನ್ನಲ್ಲಿ ಭಯಹುಟ್ಟಿಸುವವರ ಕೈಗೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಮತ್ತು ಬಾಬಿಲೋನಿನ ಜನರ ಕೈಗೆ ನಿನ್ನನ್ನು ಕೊಟ್ಟುಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟು ಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ, ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಹಾಗೂ ಬಾಬಿಲೋನಿಯ ಕೈಗೆ ಒಪ್ಪಿಸಿ ಬಿಡುತ್ತೇನೆ. ಅಧ್ಯಾಯವನ್ನು ನೋಡಿ |