Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:3 - ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:3
49 ತಿಳಿವುಗಳ ಹೋಲಿಕೆ  

‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಪುರಾತನ ಎಲ್ಲೆ ಗುರುತನ್ನು ಒತ್ತರಿಸಬೇಡ; ಅನಾಥರ ಹೊಲಗದ್ದೆಯನ್ನು ಆಕ್ರಮಿಸಬೇಡ.


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


“ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.


ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು.


ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II


ವಧಿಸುತಿಹರು ವಿಧವೆಯರನು, ಪರದೇಶಿಯರನು I ಹತ್ಯಮಾಡುತಿಹರು ಗತಿಯಿಲ್ಲದ ಅನಾಥರನು II


ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.


ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


“ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.


ಅನ್ಯಾಯವಾಗಿ ವ್ಯಾಜ್ಯತೀರಿಸುವುದನ್ನೂ ಸ್ವಾಮಿ ಲಕ್ಷ್ಯಕ್ಕೆ ತಂದುಕೊಳ್ಳದೆ ಇರುತ್ತಾನೆಯೇ?


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.


“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ಬಿಡುಗಡೆಮಾಡಿರಿ ದೀನ ಬಡಬಗ್ಗರನು I ದುರುಳರ ಕೈಯಿಂದ ರಕ್ಷಿಸಿರಿ ಅವರನು II


ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು