ಯೆರೆಮೀಯ 22:30 - ಕನ್ನಡ ಸತ್ಯವೇದವು C.L. Bible (BSI)30 ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನು ಇಂತೆನ್ನುತ್ತಾನೆ - ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾವನೂ ದಾವೀದನ ಸಿಂಹಾಸನದಲ್ಲಿ ಕೂತು ಯೆಹೂದವನ್ನು ಆಳಿ ಬಾಳನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.” ಅಧ್ಯಾಯವನ್ನು ನೋಡಿ |