Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:5 - ಕನ್ನಡ ಸತ್ಯವೇದವು C.L. Bible (BSI)

5 ನೀವು ಈ ಮಾತುಗಳನ್ನು ಕೇಳದೆಹೋದರೆ ಈ ಅರಮನೆ ಹಾಳುಬೀಳುವುದು. ಇದನ್ನು ನನ್ನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಈ ಆಜ್ಞೆಗಳನ್ನು ಪಾಲಿಸದಿದ್ದರೆ ರಾಜನ ಅರಮನೆಯನ್ನು ನಾಶಮಾಡಲಾಗುವುದು. ಅದು ಕಲ್ಲುಬಂಡೆಗಳ ರಾಶಿಯಾಗುವದೆಂದು ಯೆಹೋವನಾದ ನಾನು ಆಣೆಯಿಟ್ಟುಕೊಂಡು ಹೇಳುತ್ತೇನೆ’” ಎಂದು ಯೆಹೋವನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:5
22 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


“ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


“ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II


ಆಗ ಅವರಿಗೆ, ‘ಈ ನಾಡಿನವರು ತಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಭಿಸಿ, ಅವುಗಳಿಗೆ ಅಡ್ಡಬಿದ್ದು ಸೇವೆಸಲ್ಲಿಸಿದ್ದರಿಂದಲೇ ಅವರು ಈ ಎಲ್ಲಾ ಆಪತ್ತುಗಳನ್ನು ಅವರಿಗೆ ಬರಮಾಡಿ ಇದ್ದಾರೆ,’ ಎಂಬ ಉತ್ತರ ಸಿಕ್ಕುವುದು,” ಎಂದರು.


ಆದರೆ ನೀವು ದ್ರೋಹಿಗಳಾಗಿ, ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈ ಮುಗಿಯುವುದಾದರೆ,


ಇಗೋ, ನಿಮ್ಮ ದೇವಾಲಯ ಬರಿದಾಗುವುದು, ಪಾಳು ಬೀಳುವುದು.


“ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ,


ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಇದನ್ನು ನೋಡಿ ವಿಸ್ಮಿತರಾಗಿ, ‘ಸರ್ವೇಶ್ವರ ಈ ನಾಡನ್ನೂ ಈ ಆಲಯವನ್ನೂ ಹೀಗೇಕೆ ಮಾಡಿಬಿಟ್ಟರು?’ ಎಂದು ಕೇಳುವರು.


“ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು