Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:6 - ಕನ್ನಡ ಸತ್ಯವೇದವು C.L. Bible (BSI)

6 ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗನ್ನುತ್ತಾನೆ - ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ ಲೆಬನೋನಿನ ಶಿಖರದ ಹಾಗೂ ಇದ್ದೀ, ಆದರೂ ನಾನು ನಿನ್ನನ್ನು ಮರುಭೂವಿುಯನ್ನಾಗಿಯೂ ನಿರ್ಜನ ಪಟ್ಟಣವನ್ನಾಗಿಯೂ ಮಾಡುವದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:6
26 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.


ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.


ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”


“ಜುದೇಯದ ಅರಸನ ಮನೆತನದ ವಿಷಯವಾಗಿ ಸರ್ವೇಶ್ವರ ಹೇಳಿರುವ ಈ ಮಾತನ್ನು ಗಮನಿಸಿರಿ:


ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ಗಾಂಭೀರ್ಯ ಲೆಬನೋನಿಗೆ ಸಮಾನ ದೇವದಾರು ಮರಗಳಂತೆ ರಮಣೀಯ.


ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.


ನಲ್ಲ : ಆಹಾ! ನನ್ನ ಪ್ರಿಯಳೇ, ನೀನೆಷ್ಟು ರೂಪವತಿ! ಆಹಾ! ಎಷ್ಟು ಸುಂದರಿ! ಮುಸುಕಿನೊಳಗಿನ ಕಣ್ಣುಗಳು ಪಾರಿವಾಳಗಳು ನಿನ್ನ ತಲೆಗೂದಲಿನ ನರ್ತನವು ಗಿಲ್ಯಾದ್ ಗುಡ್ಡದಿಂದ ಇಳಿದುಬರುವ ಆಡುಮಂದೆಗೆ ಸಮಾನವು.


ಆದರೆ ನಿಮ್ಮ ಮಾತೃಭೂಮಿ ಮಾನಭಂಗಕ್ಕೆ ಈಡಾಗುವುದು. ನಿಮ್ಮನ್ನು ಹೆತ್ತ ರಾಜ್ಯ ನಾಚಿಕೊಳ್ಳುವುದು. ಹೌದು, ಅದು ಕಾಡಾಗುವುದು. ಕಗ್ಗಾಡು, ಬೆಂಗಾಡು ಆಗುವುದು. ರಾಷ್ಟ್ರಗಳಲ್ಲಿ ಅದು ಕನಿಷ್ಟವಾಗುವುದು.


ತೆರೆ, ಲೆಬನೋನೇ ನಿನ್ನ ಪುರದ್ವಾರಗಳನು ದಹಿಸಿಬಿಡಲಿ ಅಗ್ನಿ ನಿನ್ನ ದೇವದಾರುಗಳನು!


ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು