7 ಅರಮನೆಯನ್ನು ಹಾಳುಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಪ್ರತಿಯೊಬ್ಬನ ಹತ್ತಿರ ಆ ಮನೆಯನ್ನು ಹಾಳುಮಾಡಲು ಬೇಕಾಗುವ ಸಾಧನಗಳಿರುವವು. ಆ ಜನರು ನಿನ್ನ ಸುಂದರವಾದ ಮತ್ತು ಗಟ್ಟಿಯಾದ ದೇವದಾರಿನ ತೊಲೆಗಳನ್ನು ಕಡಿದುಹಾಕುತ್ತಾರೆ. ಅವರು ಆ ತೊಲೆಗಳನ್ನು ಬೆಂಕಿಯಲ್ಲಿ ಎಸೆಯುತ್ತಾರೆ.
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ
ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು : “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು.
ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.