ಯೆರೆಮೀಯ 23:11 - ಕನ್ನಡ ಸತ್ಯವೇದವು C.L. Bible (BSI)11 “ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು ! ನನ್ನಾಲಯದಲ್ಲೆ ಅವರು ನಡೆಸುವ ಕೆಟ್ಟತನವನ್ನು ನಾನು ಕಂಡಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು! ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಇದು ಯೆಹೋವನಿಂದ ಬಂದ ಸಂದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;