ಯೆರೆಮೀಯ 23:14 - ಕನ್ನಡ ಸತ್ಯವೇದವು C.L. Bible (BSI)14 ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.” ಅಧ್ಯಾಯವನ್ನು ನೋಡಿ |