Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:15 - ಕನ್ನಡ ಸತ್ಯವೇದವು C.L. Bible (BSI)

15 ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ ಹೀಗನ್ನುತ್ತಾನೆ - ಆಹಾ, ನಾನು ಇವರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು; ಯೆರೂಸಲೇವಿುನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:15
12 ತಿಳಿವುಗಳ ಹೋಲಿಕೆ  

ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಆದುದರಿಂದ ಈ ಜನರು ಕಹಿಯಾದ ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು; ವಿಷ ಬೆರೆತ ನೀರನ್ನು ಕುಡಿಯುವಂತೆ ಮಾಡುವೆನು.


ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ.


ನನ್ನನ್ನು ಹಿಡಿದು ಬಂದಿಸಿರುವನು ದಿಬ್ಬಗಳ ಮಧ್ಯೆ ಸುತ್ತುಗಟ್ಟಿರುವನು ಕಷ್ಟಸಂಕಟಗಳ ನಡುವೆ.


ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II


ಆ ನಕ್ಷತ್ರದ ಹೆಸರು ‘ವಿಷಕನ್ಯೆ'. ನೀರಿನಲ್ಲಿ ಮೂರನೆಯ ಒಂದು ಭಾಗ ವಿಷವಾಯಿತು; ಇದರಿಂದಾಗಿ ಅನೇಕರು ನೀರನ್ನು ಕುಡಿದು ಸತ್ತರು.


ಅಲ್ಲಿ ಕಹಿಬೆರೆಸಿದ ದ್ರಾಕ್ಷಾರಸವನ್ನು ಯೇಸುವಿಗೆ ಕುಡಿಯಲು ಕೊಟ್ಟರು. ಅವರು ಅದನ್ನು ರುಚಿನೋಡಿ ಕುಡಿಯಲು ಇಚ್ಛಿಸಲಿಲ್ಲ.


ನಾನು ಪಟ್ಟ ಕಷ್ಟದುಃಖವನ್ನು ಮನಸ್ಸಿಗೆ ತಂದುಕೊಂಡಾಗ ಆಗುತ್ತಿದೆ ನನಗೆ ಕಹಿಯಾದ ಅನುಭವ.


“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.


ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.


ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು