ಯೆರೆಮೀಯ 23:2 - ಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ - ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ; ಆಹಾ, ನಿಮ್ಮ ದುಷ್ಕೃತ್ಯಗಳ ನಿವಿುತ್ತ ನಾನು ನಿಮ್ಮನ್ನು ವಿಚಾರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |