ಯೆರೆಮೀಯ 23:22 - ಕನ್ನಡ ಸತ್ಯವೇದವು C.L. Bible (BSI)22 ಇವರು ನನ್ನ ಆಲೋಚನಾ ಸಭೆಯಲ್ಲಿ ಹಾಜರಿದ್ದಿದ್ದರೆ, ನನ್ನ ವಾಕ್ಯಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸುತ್ತಿದ್ದರು; ಅವರನ್ನು ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇವರು ನನ್ನ ಆಲೋಚನಾಸಭೆಯಲ್ಲಿ ನಿಂತಿದ್ದರೆ ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ ಅವರನ್ನು ಅವರ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.” ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.