Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:26 - ಕನ್ನಡ ಸತ್ಯವೇದವು C.L. Bible (BSI)

26 ಇವರ ಪೂರ್ವಜರು ಬಾಳ್‍ದೇವತೆಯನ್ನು ಸೇರಿಕೊಂಡು ನನ್ನ ಹೆಸರನ್ನು ಮರೆತುಬಿಟ್ಟರು. ಅದೇ ಪ್ರಕಾರ ಈ ಪ್ರವಾದಿಗಳು ಸ್ವಕಲ್ಪಿತ ಸುಳ್ಳು ಕನಸುಗಳನ್ನು ಒಬ್ಬರಿಗೊಬ್ಬರು ತಿಳಿಸುವುದರ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇವರ ಪಿತೃಗಳು ಬಾಳನನ್ನು ಸೇರಿ ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ ತಾವು ತಮ್ಮ ನೆರೆಹೊರೆಯವರಿಗೆ ತಿಳಿಸುವ ತಮ್ಮ ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:26
13 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!


ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ?


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು