ಯೆರೆಮೀಯ 23:34 - ಕನ್ನಡ ಸತ್ಯವೇದವು C.L. Bible (BSI)34 “ಸರ್ವೇಶ್ವರನ ಹೊರೆ” ಎಂದು ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ಹೇಳಿದ್ದೇ ಆದರೆ ನಾನು ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾವನು - ಯೆಹೋವನ ಭಾರ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಒಬ್ಬ ಪ್ರವಾದಿಯಾಗಲಿ ಯಾಜಕನಾಗಲಿ ಸಾಮಾನ್ಯ ಮನುಷ್ಯನಾಗಲಿ ‘ಇದು ಯೆಹೋವನ ಭಾರ’ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದ್ದರಿಂದ ನಾನು ಆ ವ್ಯಕ್ತಿಯನ್ನು ಮತ್ತು ಅವರ ಇಡೀ ಕುಟುಂಬವನ್ನು ದಂಡಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿ |