Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:36 - ಕನ್ನಡ ಸತ್ಯವೇದವು C.L. Bible (BSI)

36 ‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೊಂದು ಹೊರೆ. ಜೀವಸ್ವರೂಪರಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೋವನ ಭಾರ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಭಾರವಾಗಿರುವದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆಕೆಳಗು ಮಾಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:36
24 ತಿಳಿವುಗಳ ಹೋಲಿಕೆ  

ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.


ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II


ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಪ್ರತಿಯೊಬ್ಬನೂ ತನ್ನ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.


ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.


ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.


ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು I ಇದು ತರಲಿ ಭಕ್ತರೆಲ್ಲರಿಗೆ ಗೌರವವನು I ಅಲ್ಲೆಲೂಯ! II


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?


“ಸರ್ವೇಶ್ವರನಿಂದ ನಿಮಗೆ ಯಾವ ಉತ್ತರ ದೊರಕಿತು? ಸರ್ವೇಶ್ವರ ಏನು ನುಡಿದಿದ್ದಾರೆ?” ಎಂದು ಪ್ರವಾದಿಯನ್ನು ಕೇಳಿರಿ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು