Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:39 - ಕನ್ನಡ ಸತ್ಯವೇದವು C.L. Bible (BSI)

39 ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಪಟ್ಟಣವನ್ನೂ ಭಾರವೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:39
30 ತಿಳಿವುಗಳ ಹೋಲಿಕೆ  

“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನೇ ಕೊಬ್ಬಿದ ಟಗರು ಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?


ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.


ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”


ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”


ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.


ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು" ಎಂಬ ನಾಡಿನಲ್ಲಿ ವಾಸಮಾಡಿದನು.


ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.


“ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.


“ಸರ್ವೇಶ್ವರನ ಹೊರೆ” ಎಂದು ಹೇಳಬೇಡಿ. ಹೇಳಿದರೆ ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ನಿಮಗೆ ‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದೆಂದು, ಹೇಳಿಕಳುಹಿಸಿದರೂ ನೀವು ಎತ್ತಿದ್ದೀರಿ.


ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು