ಯೆರೆಮೀಯ 23:4 - ಕನ್ನಡ ಸತ್ಯವೇದವು C.L. Bible (BSI)4 ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಅವುಗಳ ಮೇಲೆ ಕುರುಬರನ್ನು ನೇವಿುಸುವೆನು, ಅವರು ಅವುಗಳನ್ನು ಮೇಯಿಸುವರು; ಅವು ಇನ್ನು ಭಯಪಡವು, ಬೆದರವು, ಅವುಗಳಲ್ಲಿ ಒಂದೂ ಕಡಿಮೆಯಾಗದು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |