Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:40 - ಕನ್ನಡ ಸತ್ಯವೇದವು C.L. Bible (BSI)

40 ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತಾಪಮಾನವನ್ನೂ ನಿಮಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:40
10 ತಿಳಿವುಗಳ ಹೋಲಿಕೆ  

ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


“ಅವರ ಸಂತಾನ ಹೆಚ್ಚಿದ ಹಾಗೆಲ್ಲ ಅವರು ನನ್ನ ವಿರುದ್ಧ ಪಾಪಮಾಡುತ್ತಾ ಬಂದಿದ್ದಾರೆ. ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುತ್ತೇನೆ.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪರವಾಗಿ ನಿಂತದ್ದರಿಂದ ನೀನು ನಾಚಿಕೆಪಡಬೇಕು; ಅವರಿಗಿಂತ ಅಧಿಕವಾಗಿ ನೀನು ಅಸಹ್ಯ ಪಾಪಗಳನ್ನು ಮಾಡಿರುವುದರಿಂದ ಅವರು ನಿನಗಿಂತ ಉತ್ತಮರಾಗಿದ್ದಾರೆ. ಹೌದು, ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿದ್ದಕ್ಕಾಗಿ ಲಜ್ಜೆಪಡು, ನಾಚಿಕೆಪಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು