Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:5
49 ತಿಳಿವುಗಳ ಹೋಲಿಕೆ  

ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಆದರೆ ದೇವರು ಆ ಒಡಂಬಡಿಕೆಗೆ ಸೇರಿದ ಜನರನ್ನು ಆರೋಪಿಸುತ್ತಾ ಇಂತೆಂದಿದ್ದಾರೆ : “ಇಗೋ, ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ್ಯ ವಂಶದವರೊಂದಿಗೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಕಾಲವು ಬರಲಿದೆ, ಎಂದರು ಸರ್ವೇಶ್ವರ.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


“ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


“ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II


ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ದೇವದಾರಿನ ಕೆಲಸದಲ್ಲಿ, ಬೇರೆಯವರನ್ನು ಮೀರಿಸುವುದರಲ್ಲಿ ಅಡಗಿದೆಯೇ ನಿನ್ನ ದೊರೆತನದ ಹಿರಿಮೆ? ನಿನ್ನ ತಂದೆ ಎಷ್ಟೇ ಕುಡಿದರೂ ತಿಂದರೂ ನ್ಯಾಯನೀತಿಯನ್ನು ಪಾಲಿಸುತ್ತಿದ್ದನಲ್ಲವೆ? ಆಗ ಅವನಿಗೆ ಎಲ್ಲವು ನೆಮ್ಮದಿಯಾಗಿತ್ತಲ್ಲವೆ?


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.


ಧ್ವಂಸ, ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.


ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು