Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:7 - ಕನ್ನಡ ಸತ್ಯವೇದವು C.L. Bible (BSI)

7 ಬರಲಿರುವ ಆ ಕಾಲದಲ್ಲಿ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಹಾ, ಮುಂದಿನ ಕಾಲದಲ್ಲಿ ಜನರು - ಇಸ್ರಾಯೇಲ್ಯರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬದಾಗಿ ಪ್ರಮಾಣಮಾಡುವದನ್ನು ಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇದು ಯೆಹೋವನಿಂದ ಬಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:7
9 ತಿಳಿವುಗಳ ಹೋಲಿಕೆ  

ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.


ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು