Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:7 - ಕನ್ನಡ ಸತ್ಯವೇದವು C.L. Bible (BSI)

7 ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:7
32 ತಿಳಿವುಗಳ ಹೋಲಿಕೆ  

ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ನೀವು ನನಗೆ ಪ್ರಜೆಯಾಗಿರುವಿರಿ ನಾನು ನಿಮಗೆ ದೇವರಾಗಿರುವೆನು.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೆ, ನೀವು ಆರಿಸಿಕೊಂಡ ಪಟ್ಟಣದ ಕಡೆಗೆ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೆ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗೂ ಪೂರ್ಣಪ್ರಾಣದಿಂದ ನಿಮ್ಮನ್ನು ಪ್ರಾರ್ಥಿಸಿದರೆ,


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.


ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.


ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.


“ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು.


ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು