ಯೆರೆಮೀಯ 24:9 - ಕನ್ನಡ ಸತ್ಯವೇದವು C.L. Bible (BSI)9 ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು. ಅಧ್ಯಾಯವನ್ನು ನೋಡಿ |