Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:16 - ಕನ್ನಡ ಸತ್ಯವೇದವು C.L. Bible (BSI)

16 ಅವರು ಅದನ್ನು ಕುಡಿದು ಓಲಾಡುವರು, ನಾನು ಕಳಿಸುವ ಖಡ್ಗದಿಂದ ಹುಚ್ಚುಚ್ಚಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು, ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ಈ ದ್ರಾಕ್ಷಾರಸವನ್ನು ಕುಡಿಯುವರು. ಆಮೇಲೆ ಅವರು ವಾಂತಿ ಮಾಡಿಕೊಳ್ಳುವರು ಮತ್ತು ಹುಚ್ಚರಂತೆ ವರ್ತಿಸುವರು. ನಾನು ಬೇಗನೆ ಅವರ ವಿರುದ್ಧ ಖಡ್ಗವನ್ನು ಕಳುಹಿಸುತ್ತಿರುವುದರಿಂದ ಅವರು ಹೀಗೆ ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:16
16 ತಿಳಿವುಗಳ ಹೋಲಿಕೆ  

“ನಿನೆವೆಯೇ, ನೀನು ಸಹ ಮತ್ತಳಾಗಿ ತತ್ತರಿಸುವೆ. ಶತ್ರುಗಳಿಂದ ಆಶ್ರಯ ಕೋರುವೆ.


ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


ಅವರು ಹೊಟ್ಟೆಬಾಕರೇ ಸರಿ. ಅವರಿಗೆ ಔತಣವನ್ನು ಸಿದ್ಧಮಾಡುವೆನು. ತಿಂದು ಸಂಭ್ರಮಪಡುವಂತೆ ಮಾಡುವೆನು. ತಲೆಗೇರುವತನಕ ಕುಡಿಸಿ ಎಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆಯಲ್ಲಿರುವಂತೆ ಮಾಡುವೆನು.


ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’


ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ.


ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು.


“ಯೆರೆಮೀಯನೇ, ನೀನು ಅವರಿಗೆ ಹೀಗೆಂದು ಸಾರು : ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಸಂದೇಶವನ್ನು ಕೇಳಿ - ‘ಪ್ರತಿಯೊಂದು ಕುಡಿಕೆಯು ದ್ರಾಕ್ಷಾರಸದಿಂದ ತುಂಬಿರುವುದು.’ ಆಗ ಅವರು ನಿನಗೆ - ‘ಪ್ರತಿಯೊಂದು ಕುಡಿಕೆ ದ್ರಾಕ್ಷಾರಸದಿಂದ ತುಂಬಿರುವುದು ಎಂಬುದು ನಮಗೆ ಗೊತ್ತಿಲ್ಲವೆ?’ ಎಂದು ಹೇಳುವರು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


“ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು