Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:2 - ಕನ್ನಡ ಸತ್ಯವೇದವು C.L. Bible (BSI)

2 ಅದನ್ನು ಯೆರೆಮೀಯನು ಯೆಹೂದ್ಯರೆಲ್ಲರಿಗೂ ಸಮಸ್ತ ಜೆರುಸಲೇಮಿನವರಿಗೂ ಸಾರಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇವಿುನವರಿಗೂ ಸಾರಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆರೆಮೀಯನು ಈ ಸಂದೇಶವನ್ನು ಯೆಹೂದದ ಜನರೆಲ್ಲರಿಗೂ ಜೆರುಸಲೇಮಿನ ಜನರೆಲ್ಲರಿಗೂ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:2
8 ತಿಳಿವುಗಳ ಹೋಲಿಕೆ  

ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


“ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು