ಯೆರೆಮೀಯ 25:28 - ಕನ್ನಡ ಸತ್ಯವೇದವು C.L. Bible (BSI)28 ಒಂದು ವೇಳೆ ಅವರು ಆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಪ್ಪದಿದ್ದರೆ ಅವರಿಗೆ ಹೀಗೆಂದು ಹೇಳು - ‘ಸರ್ವಶಕ್ತ ಸರ್ವೇಶ್ವರನ ನುಡಿ ಇವು: ನೀವು ಕುಡಿಯಲೇಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಲ್ಲದಿದ್ದರೆ ನೀನು ಅವರಿಗೆ ಹೀಗೆ ಹೇಳು - ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನೀವು ಕುಡಿಯಲೇಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಅವರು ನಿನ್ನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಳ್ಳಲು ಒಪ್ಪುವದಿಲ್ಲ. ಅವರು ಅದನ್ನು ಕುಡಿಯಲು ಒಪ್ಪುವದಿಲ್ಲ. ಆದರೆ ನೀನು ಅವರಿಗೆ ಹೀಗೆ ಹೇಳು: ‘ನೀವು ಈ ಪಾತ್ರೆಯಿಂದ ಕುಡಿಯಲೇಬೇಕಾಗುವುದೆಂದು ಸರ್ವಶಕ್ತನಾದ ದೇವರು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು. ಅಧ್ಯಾಯವನ್ನು ನೋಡಿ |