Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:3 - ಕನ್ನಡ ಸತ್ಯವೇದವು C.L. Bible (BSI)

3 “ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:3
32 ತಿಳಿವುಗಳ ಹೋಲಿಕೆ  

ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ,


ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.


ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದೆಹೋದರು. ನನ್ನ ದಾಸರಾದ ಪ್ರವಾದಿಗಳನ್ನು ಪದೇಪದೇ ಅವರ ಬಳಿಗೆ ಕಳಿಸಿದರೂ ಕೇಳಲೊಲ್ಲದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.


ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಾಡನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕಾಗಿ ಅಚಲ್ಯನ ಮಗ ಶಾಫಾನನನ್ನು ಪುರಾಧಿಕಾರಿಯಾದ ಮಾಸೇಯನನ್ನು ಮತ್ತು ಮುಖ್ಯಮಂತ್ರಿಯಾಗಿದ್ದ ಯೋವಾಹಾಜನ ಮಗ ಯೋವಾಹನನ್ನು ಕಳುಹಿಸಿದನು.


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.


ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು.


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಸರ್ವೇಶ್ವರ ತಮ್ಮ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಿದ್ದರು. ಆದರೂ ನೀವು ಗಮನಿಸಲಿಲ್ಲ; ಕಿವಿಗೊಡಲೂ ಇಲ್ಲ.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


“ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ I ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, II


ಆಗ ಇಸ್ರಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣ ನಮ್ಮದೆಂದು ನಿಮಗೆ ಗೊತ್ತುಂಟಲ್ಲವೆ; ಅದನ್ನು ಇಷ್ಟರವರೆಗೂ ಸಿರಿಯಾದವರ ಅರಸನಿಂದ ತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತಿರುತ್ತೇವೆ,” ಎಂದು ಹೇಳಿದನು.


ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.


ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು.


ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.


ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ.


ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.


‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ !


ಕೇಳಿಯೂ ಯಾವನಾದರು ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಕಾರಣನಾಗುತ್ತಾನೆ.


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು