Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:34 - ಕನ್ನಡ ಸತ್ಯವೇದವು C.L. Bible (BSI)

34 ‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಕುರುಬರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಬೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನ್ನು ವಧಿಸುವ ಕಾಲ ಬಂದಿದೆ. ನಾನು ನಿಮ್ಮ ಕುರಿಗಳನ್ನು ದಿಕ್ಕಾಪಾಲು ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:34
34 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನೇ ಕೊಬ್ಬಿದ ಟಗರು ಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!


“ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಅಕಟಕಟಾ, ಕುರಿಗಾಹಿಗಳ ಕೂಗಾಟ ಮೇಷಪಾಲರ ಕಿರುಚಾಟ ಸರ್ವೇಶ್ವರನಿಂದಲೆ ಆ ಹುಲ್ಲುಗಾವಲಿನ ವಿನಾಶ!


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;


ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.


ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.


ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!


“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ !” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು