ಯೆರೆಮೀಯ 25:38 - ಕನ್ನಡ ಸತ್ಯವೇದವು C.L. Bible (BSI)38 ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು. ಅಧ್ಯಾಯವನ್ನು ನೋಡಿ |
ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?