Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:6 - ಕನ್ನಡ ಸತ್ಯವೇದವು C.L. Bible (BSI)

6 ಬೇರೆ ದೇವರುಗಳನ್ನು ಹಿಂಬಾಲಿಸಿ, ಅವರನ್ನು ಸೇವಿಸಿ ಪೂಜಿಸಬೇಡಿ. ನಿಮ್ಮ ಕೈ ಕೃತಿಗಳಾದ ವಿಗ್ರಹಗಳನ್ನು ಆರಾಧಿಸಿ, ನನ್ನನ್ನು ರೇಗಿಸಬೇಡಿ. ಆಗ ನಾನು ನಿಮಗೆ ಯಾವ ಕೇಡನ್ನೂ ಮಾಡೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸದಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡೆನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:6
17 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಇಸ್ರಯೇಲರಿಗೆ ಸರ್ವೇಶ್ವರ, “ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂಬಾರದು. ಸೇವೆಮಾಡಬಾರದು, ಬಲಿ ಅರ್ಪಿಸಲೂಬಾರದು.


ಸುತ್ತಮುತ್ತಲಿರುವ ಜನಾಂಗಗಳು ಹಿಂಬಾಲಿಸುವ ದೇವರುಗಳನ್ನು ನೀನು ಆರಾಧಿಸಬಾರದು.


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ಯೆಹೂದ್ಯರು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಸರ್ವೇಶ್ವರನನ್ನು ರೇಗಿಸಿದರು.


ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.


‘ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ’ ಎಂದು ಬೋಧಿಸಬಹುದು; ಆ ಬೋಧನೆಯನ್ನು ರುಜುವಾತು ಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಬಹುದು.


ಆದ್ದರಿಂದ ನೀವು ನನಗೆ ಪ್ರತಿಯಾಗಿ ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಳ್ಳಬಾರದು,


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.


“ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು