Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:13 - ಕನ್ನಡ ಸತ್ಯವೇದವು C.L. Bible (BSI)

13 ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನಿಮ್ಮ ನಡತೆಯನ್ನು ಬದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ನಿಮಗೆ ಕೇಡುಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:13
21 ತಿಳಿವುಗಳ ಹೋಲಿಕೆ  

ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.


ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.


ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು