ಯೆರೆಮೀಯ 26:15 - ಕನ್ನಡ ಸತ್ಯವೇದವು C.L. Bible (BSI)15 ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |