ಯೆರೆಮೀಯ 26:16 - ಕನ್ನಡ ಸತ್ಯವೇದವು C.L. Bible (BSI)16 ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |