Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:18 - ಕನ್ನಡ ಸತ್ಯವೇದವು C.L. Bible (BSI)

18 “ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:18
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು.


“ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?


ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.


ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು