Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರನ ಹೆಸರಿನಲ್ಲಿ ಪ್ರವಾದನೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿ ಇದ್ದ. ಅವನು ಕಿರ್ಯತ್‍ಯಾರೀಮ್ ಊರಿಗೆ ಸೇರಿದ ಶಮಾಯನ ಮಗ ಊರೀಯ ಎಂಬುವನು. ಯೆರೆಮೀಯನು ನುಡಿದಂತೆಯೇ ಈ ನಗರಕ್ಕೂ ಈ ನಾಡಿಗೂ ಅಹಿತವಾದುದನ್ನೆ ನುಡಿಯುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮತ್ತು ಶಮಾಯನ ಮಗನೂ ಕಿರ್ಯತ್‍ಯಾರೀಮ್ ಊರಿನವನೂ ಆದ ಊರೀಯನೆಂಬವನೊಬ್ಬನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮೊದಲು ಯೆಹೋವನ ಸಂದೇಶವನ್ನು ಪ್ರವಾದಿಸುವ ಇನ್ನೊಬ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್‌ಯಾರೀಮ್ ಎಂಬ ಊರಿನವನು. ಈ ನಗರದ ಬಗ್ಗೆ ಮತ್ತು ಪ್ರದೇಶದ ಬಗ್ಗೆ ಯೆರೆಮೀಯನು ಪ್ರವಾದಿಸಿದ್ದನ್ನೇ ಊರೀಯನು ಪ್ರವಾದಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:20
9 ತಿಳಿವುಗಳ ಹೋಲಿಕೆ  

ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದುಹೋದವು. ಈ ಕಾಲದಲ್ಲಿ ಎಲ್ಲ ಇಸ್ರಯೇಲರು ಸರ್ವೇಶ್ವರನಿಗಾಗಿ ಹಂಬಲಿಸುತ್ತಿದ್ದರು.


ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಸರ್ವೇಶ್ವರನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿ,” ಎಂದು ತಿಳಿಸಿದರು.


ಈ ಎಲ್ಲೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು, ಕಿರ್ಯತ್ ಬಾಳ್ ಎನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯತ್ಯಾರೀಮ್ ಎಂಬ ನಗರದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ವಂಶಸ್ಥರ ಪಶ್ಚಿಮದ ಎಲ್ಲೆ.


ಕಿರ್ಯಾತ್ಯಾರಿಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ನಗರಗಳು ಮತ್ತು ಅವುಗಳ ಗ್ರಾಮಗಳು.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಆಗ ರಾಜ್ಯಾಧಿಕಾರಿಗಳು ಬಾರೂಕನಿಗೆ, ನೀನೂ ಯೆರೆಮೀಯನೂ ಹೊರಟುಹೋಗಿ ಅವಿತುಕೊಳ್ಳಬೇಕು. ನೀವು ಇಲ್ಲಿದ್ದೀರೆಂದು ಯಾರಿಗೂ ಗೊತ್ತಾಗಬಾರದು,” ಎಂದು ಹೇಳಿದರು.


ತಮ್ಮ ದೇವರಾದ ಸರ್ವೇಶ್ವರನಾಣೆ, ನನ್ನ ಒಡೆಯ ಸೇವಕರನ್ನು ಅಟ್ಟಿ ನಿಮ್ಮನ್ನು ಹುಡುಕದ ಜನಾಂಗವಾಗಲಿ, ರಾಜ್ಯವಾಗಲಿ ಒಂದೂ ಇಲ್ಲ. ಆ ಜನಾಂಗ, ರಾಜ್ಯಗಳವರು, ‘ಎಲೀಯನು ನಮ್ಮಲ್ಲಿರುವುದಿಲ್ಲ,’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


ಅವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅವನ ಕಾಲದಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು