Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:6
20 ತಿಳಿವುಗಳ ಹೋಲಿಕೆ  

ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”


ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು