Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:7 - ಕನ್ನಡ ಸತ್ಯವೇದವು C.L. Bible (BSI)

7 ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತಾಡುವದನ್ನು ಯಾಜಕರೂ ಪ್ರವಾದಿಗಳೂ ಸಕಲಜನರೂ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಆಲಯದಲ್ಲಿ ಯೆರೆಮೀಯನು ಹೇಳಿದ ಇದೆಲ್ಲವನ್ನು ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:7
8 ತಿಳಿವುಗಳ ಹೋಲಿಕೆ  

ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಇಂತಿರಲು ಪ್ರಧಾನಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು.


ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು.


ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು