Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:8 - ಕನ್ನಡ ಸತ್ಯವೇದವು C.L. Bible (BSI)

8 ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು ನಿನಗೆ ಮರಣವೇ ಆಗಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:8
22 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.


ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


ಇತ್ತ, ಬರಬ್ಬನನ್ನು ಬಿಡುಗಡೆಮಾಡಿ ಯೇಸುವನ್ನು ಕೊಲ್ಲಬೇಕೆಂದು ಕೇಳಿಕೊಳ್ಳುವಂತೆ ಮುಖ್ಯಯಾಜಕರು ಮತ್ತು ಪ್ರಮುಖರು ಜನರನ್ನು ಪ್ರಚೋದಿಸಿದರು.


ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”


ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.


ಯೆರೆಮೀಯನು ಜನರೆಲ್ಲರನ್ನು ಸಂಬೋಧಿಸಿ ದೇವರಾದ ಸರ್ವೇಶ್ವರ ತನ್ನ ಮುಖಾಂತರ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲ ತಿಳಿಸಿದನು.


ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು