Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು; ನೀವು ದೇಶಭ್ರಷ್ಟರಾಗಿ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಅವರು ನಿಮಗೆ ಹೇಳುವುದು ಸುಳ್ಳುಗಳೇ. ಅವರು ನಿಮ್ಮನ್ನು ನಿಮ್ಮ ದೇಶದಿಂದ ಬಹುದೂರ ತೆಗೆದುಕೊಂಡು ಹೋಗುವರು. ನಾನು ನಿಮ್ಮನ್ನು ನಿಮ್ಮ ದೇಶದಿಂದ ಬಲವಂತವಾಗಿ ಹೊರಗಟ್ಟುವೆನು. ನೀವು ಅನ್ಯ ದೇಶದಲ್ಲಿ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:10
17 ತಿಳಿವುಗಳ ಹೋಲಿಕೆ  

ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.


‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”


ಬಳಿಕ ನಾನು ಯಾಜಕರಿಗೂ ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಸರ್ವೇಶ್ವರನ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು