Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:13 - ಕನ್ನಡ ಸತ್ಯವೇದವು C.L. Bible (BSI)

13 ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನೂ ನಿನ್ನ ಜನರೂ ಖಡ್ಗ ಕ್ಷಾಮವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವದೆಂದು ಯೆಹೋವನು ನುಡಿದಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನ್ನ ಜನರು ವೈರಿಗಳ ಖಡ್ಗದಿಂದಲೂ ಹಸಿವೆಯಿಂದಲೂ ಭಯಂಕರವಾದ ವ್ಯಾಧಿಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯಬೇಕಾಗುವುದೆಂದು ಯೆಹೋವ ದೇವರೇ ನುಡಿದಿದ್ದಾರೆ. ಅಂಥ ಗತಿ ನಿಮಗೂ, ನಿಮ್ಮ ಪ್ರಜೆಗೂ ಏಕೆ ಬರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:13
11 ತಿಳಿವುಗಳ ಹೋಲಿಕೆ  

ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.


ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು