Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:15 - ಕನ್ನಡ ಸತ್ಯವೇದವು C.L. Bible (BSI)

15 ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ; ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:15
27 ತಿಳಿವುಗಳ ಹೋಲಿಕೆ  

ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು; ನೀವು ದೇಶಭ್ರಷ್ಟರಾಗಿ ನಾಶವಾಗುವಿರಿ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನೇ ಸಾರುತ್ತಾರೆ. ಅವರು ನನ್ನಿಂದ ಕಳಿಸಿದವರಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.


ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”


ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.”


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು