Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:16 - ಕನ್ನಡ ಸತ್ಯವೇದವು C.L. Bible (BSI)

16 ಬಳಿಕ ನಾನು ಯಾಜಕರಿಗೂ ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಸರ್ವೇಶ್ವರನ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ನಾನು ಯಾಜಕರಿಗೂ ಈ ಸಕಲ ಜನರಿಗೂ ಹೀಗೆ ನುಡಿದೆನು - ಯೆಹೋವನು ಇಂತೆನ್ನುತ್ತಾನೆ - ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು ಎಂಬದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಳಿಕ ನಾನು ಯಾಜಕರಿಗೂ, ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಯೆಹೋವ ದೇವರ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು,’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:16
7 ತಿಳಿವುಗಳ ಹೋಲಿಕೆ  

ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.


ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು; ನೀವು ದೇಶಭ್ರಷ್ಟರಾಗಿ ನಾಶವಾಗುವಿರಿ.


‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು