Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:17 - ಕನ್ನಡ ಸತ್ಯವೇದವು C.L. Bible (BSI)

17 ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಪ್ರವಾದಿಗಳ ಮಾತನ್ನು ಕೇಳಬೇಡಿ. ಬಾಬಿಲೋನಿನ ರಾಜನ ಸೇವೆಮಾಡಿರಿ. ದಂಡನೆಗಳನ್ನು ಸ್ವಿಕರಿಸಿರಿ, ಆಗ ನೀವು ಬದುಕುವಿರಿ. ನಿಷ್ಕಾರಣವಾಗಿ ಈ ಜೆರುಸಲೇಮ್ ನಗರವು ಹಾಳಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:17
5 ತಿಳಿವುಗಳ ಹೋಲಿಕೆ  

ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.


ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.


ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು