Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:19 - ಕನ್ನಡ ಸತ್ಯವೇದವು C.L. Bible (BSI)

19-20 (ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಜುದೇಯದ ಹಾಗು ಜೆರುಸಲೇಮಿನ ಎಲ್ಲ ಮಂತ್ರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು, ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಮತ್ತು ಯೆರೂಸಲೇವಿುನ ಸಮಸ್ತ ಪ್ರಧಾನರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಬಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19-20 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:19
10 ತಿಳಿವುಗಳ ಹೋಲಿಕೆ  

ಬಾಬಿಲೋನಿಯದವರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ, ಕಡಲಿನ ಆಕಾರದ ಕಂಚಿನ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.


ಪ್ರತಿಯೊಂದು ಕಂಬ ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗು ದಾಳಿಂಬೆ ಹಣ್ಣುಗಳು ಇದ್ದವು.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,


ಇದಲ್ಲದೆ, ಹೀರಾಮನು ಹತ್ತು ಕಂಚಿನ ಪೀಠಗಳನ್ನು ಮಾಡಿದನು. ಪ್ರತಿಯೊಂದು 1:8 ಮೀಟರ್ ಉದ್ದ, 1:8 ಮೀಟರ್ ಅಗಲ, 1:3 ಮೀಟರ್ ಎತ್ತರ ಇತ್ತು.


ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು